ಮಡಿಕೇರಿ : ಕೊಡಗು ಜಿಲ್ಲೆ ಪ್ರವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ವಿವಾದಕ್ಕೆ ಸಿಲುಕಿದ್ದು, ಸಿದ್ದರಾಮಯ್ಯ ಮಾಂಸ ಸೇವಿಸಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಸಿದ್ದರಾಮಯ್ಯ ಮಡಿಕೇರಿ ಪ್ರವಾಸದ ವೇಳೆ ಮಡಿಕೇರಿ ಅತಿಥಿ ಗೃಹದಲ್ಲಿ ನಾಟಿ ಕೋಳಿ ಸಾರು ತಿಂದು ಬಳಿಕ ಕೊಡ್ಲಿಪೇಟೆ ಬಸವೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದ್ದು, ಮಡಿಕೇರಿಯ ಅತಿಥಿ ಗೃಹದಲ್ಲಿ ಸಿದ್ದರಾಮಯ್ಯ ನಾಟಿ ಕೋಳಿ ಸಾರು ಸೇವಿಸಿರುವ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಪದ್ದತಿಯಲ್ಲಿ ಮಾಂಸ ಸೇವಿಸಿ ಯಾರೂ ದೇವಸ್ಥಾನಕ್ಕೆ ಹೋಗುವುದಿಲ್ಲ.ಆದರೆ ಮಾಂಸ ತಿಂದು ಹೋಗಿದ್ದರೆ ಖಂಡನೀಯ, ಸಿದ್ದರಾಮಯ್ಯ ತಪ್ಪು ಮಾಡಿದ್ದರೆ ಆ ದೇವರೇ ಶಿಕ್ಷೆ ಕೊಡುತ್ತಾನೆ. ಮಾಂಸ ಸೇವಿಸಿಲ್ಲ ಎನ್ನುವುದಾದರೆ ದೇವರೇ ನೋಡಿಕೊಳ್ಳುತ್ತಾನೆ ಎಂದಿದ್ದಾರೆ.