ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯ ಇರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯ ಇರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಮುತಾಲಿಕ್ ಅವರ ದಕ್ಷಿಣ ಕನ್ನಡ ಜಿಲ್ಲೆ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದರು. ಆದರೆ ನಿರ್ಬಂಧವಿದ್ದರೂ ಜಿಲ್ಲೆ ಪ್ರವೇಶಕ್ಕೆ ಯತ್ನಿಸಿದ ಪ್ರಮೋದ್ ಮುತಾಲಿಕ್ ಅವರನ್ನು ಕಮಿಷನರೇಟ್ ವ್ಯಾಪ್ತಿಗೆ ಪ್ರವೇಶಿಸಿದ ಕೂಡಲೇ ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ.
BIGG NEWS : ʻ ಪ್ರವೀಣ್, ಫಾಜಿಲ್ ತಾಯಿಯಂದಿರ ನೋವು ಒಂದೇ ಅಲ್ವಾ? ʼ : ಯು.ಟಿ ಖಾದರ್ ಆಕ್ರೋಶ