ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

BIG NEWS : ಎಷ್ಟೇ ಪ್ರಭಾವಿಗಳಾಗಿದ್ರೂ ‘ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ’ ನಿಶ್ಚಿತ : ಅಬಕಾರಿ ಸಚಿವ ಕೆ.ಗೋಪಾಲಯ್ಯ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುತ್ತೇವೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾದ ಕುರಿತು ಆರ್ಥಿಕ ಇಲಾಖೆಗೆ ಕಡತ ಹೋಗಿದೆ. ಆಸ್ಪತ್ರೆ ನಿರ್ಮಾಣ ಸ್ಥಳದ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಅಧಿವೇಶನದ ಬಳಿಕ ಪ್ರವಾಸ ಮಾಡಿ ಪೈನಲ್ ಮಾಡುತ್ತೇವೆ. ಸೂಕ್ತವಾದ ಸ್ಥಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ, ಪ್ರತಿಭಟನೆಗಳು ತೀವ್ರಗೊಂಡಿದ್ದವು.ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದೆ.

Share.
Exit mobile version