ಮುಂಬೈ : ಸುರೇಶ್ ರೈನಾ ಇಂಡಿಯನ್ ಪ್ರೀಮಿಯರ್ ಲೀಗ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 4 ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿದ್ದ ರೈನಾ, 2022ರ ಆರಂಭದಲ್ಲಿ ನಡೆದ ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದರು.

35 ವರ್ಷದ ಸುರೇಶ್ ರೈನಾ ಆಗಸ್ಟ್ 15, 2020 ರಂದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಇದೀಗ ಐಪಿಎಲ್ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಘೋಷಿಸಿದ್ದಾರೆ.

ನಿವೃತ್ತಿ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸುರೇಶ್ ರೈನಾ, ನನ್ನ ದೇಶ ಮತ್ತು ರಾಜ್ಯ ಯುಪಿಯನ್ನು ಪ್ರತಿನಿಧಿಸುವುದು ಸಂಪೂರ್ಣ ಗೌರವವಾಗಿದೆ. ನಾನು ಕ್ರಿಕೆಟ್ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ,ಉತ್ತರ ಪ್ರದೇಶ ಕ್ರಿಕಟ್, ಚೆನ್ನೈ ಐಪಿಎಲ್ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

Share.
Exit mobile version