ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಮತ್ತೆ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಬಜರಂಗದಳದ ಮೃತ ಹರ್ಷನ ಕುಟುಂಬಸ್ಥರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಘಟನೆ ತಡರಾತ್ರಿ ನಡೆದಿದೆ.
ಶಿವಮೊಗ್ಗ ನಗರದಲ್ಲಿ ತಡರಾತ್ರಿ ಅನ್ಯಕೋಮಿನ ಯುವಕರ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ಹರ್ಷ ಮನೆ ಬಳಿ ಬೈಕ್ ನಿಲ್ಲಿಸಿ ಹರ್ಷ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದು, ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಹರ್ಷ ಮನೆ ಮುಂದೆ ಬೈಕ್ ನಿಲ್ಲಿಸಿದ್ದ ದುಷ್ಕರ್ಮಿಗಳು ಹರ್ಷನ ಸಹೋದರಿ ಹಾಗೂ ಕುಟುಂಬಸ್ಥರಿಗೆ ಬೆದರಿಕೆ ಹಾಕಿದ್ದಾರೆ.ಸ್ಥಳೀಯರು ಹಿಂಬಾಲಿಸಿದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.ಗಾಯಾಳು ಪ್ರಕಾಶ್ ಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೀಗೆಹಟ್ಟಿ ಭಾಗದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಮಿಥುನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.