ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.
ವಿಜಯಪುರ ನಗರದ ಹಲವಡೆ ತಡರಾತ್ರಿ 11.42 ಸುಮಾರಿಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ರಾತ್ರಿಯಿಂದ ಆತಂಕದಲ್ಲಿ ಜನರಿಗೆ ಮತ್ತೆ ಬೆಳಗ್ಗೆ 6.19 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ವಿಜಯಪುರ ನಗರದ ರೈಲ್ವೇ ಸ್ಟೇಷನ್ ಏರಿಯಾ, ರಂಭಾಪುರ ಬಡಾವನೆ, ಬಸವೇಶ್ವರ ನಗರ, ಗೋಳಗುಮ್ಮಟ್ಟ ಏರಿಯಾ ಸೇರಿದಂತೆ ಹಲವಡೆ ಭೂಮಿ ಕಂಪಿಸಿದೆ. ಜಿಲ್ಲೆಯಲ್ಲಿ ಪದೇ ಪದೇ ಭೂಕಂಪನಿಂದ ಜನರು ಆತಂಕದಲ್ಲಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.