ಬೆಂಗಳೂರು: ಶೀಘ್ರವೇ 7 ಸಾವಿರ ಪ್ರಾಧ್ಯಾಪಕರ ನೇಮಕ ಮಾಡಲಾಗುವುದು ಅಂಥ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ. ಅವರು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ,
ರಾಜ್ಯದ ಪ್ರಥಮ ದರ್ಜೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ 7 ಸಾವಿರ ಮಂದಿಯನ್ನು ನೇಮಕ ಮಾಡಿಕೊಳ್ಳುವ ನಿಟ್ಟಿನಲ್ಲಿ ಈಗಾಗಳೇ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಆರ್ಥೀಕ ಇಲಾಖೆಯಿಂದ ಒಪ್ಪಿಗೆ ಬಂದ ಬಳಿಕ ನೇಮಕಾತಿ ಪ್ರಿಕ್ರಿಯೆಗೆ ಚಾಲನೆ ನೀಡಲಾಗುವುದು ಅಂತ ತಿಳಿಸಿದರು. ಇನ್ನೂ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಈ ನಿಟ್ಟಿನಲ್ಲಿ ಶೀಘ್ರದಲ್ಲಿ ಖಾಯಂ ಭೋದಕರ ನೇಮಕಾತಿ ಮಾಡಿಕೊಳ್ಳಲಾಗುವುದು ಅಂತ ತಿಳಿಸಿದರು .