ಬೆಂಗಳೂರು: ನಾಳೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ರೇವಣ್ಣನವರು ಬೆಂಗಳೂರಿಗೆ ಆಗಮಿಸಲಿದ್ದು,ನಾಳೆಯೇ ಪೊಲೀಸರಿಗೆ ಶರಣಾರಾಗಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಪ್ರಜ್ಚಲ್‌ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎನ್ನಲಾಗಿದ.

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಎಸ್​ಐಟಿ ಅಧಿಕಾರಿಗಳು ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ರೇವಣ್ಣರನ್ನು ಬಂಧಿಸಿದ್ದು ತಮ್ಮ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ನಾಳೆ ನ್ಯಾಯಾಧೀಶರ ಮುಂದೆ ಅವರನ್ನು ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ.

Share.
Exit mobile version