ಹಾವೇರಿ : ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಆರ್ ಎಸ್ಎಸ್ ಕಾರ್ಯಕರ್ತರ ಮೇಲೆ ನಿನ್ನೆ ರಾತ್ರಿ ಅನ್ಯಕೋಮಿನ ಯುವಕರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.
BIGG BREAKING NEWS : ಡಿನೋಟಿಫಿಕೇಶನ್ ಅಕ್ರಮ ಆರೋಪ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ರಟ್ಟೀಹಳ್ಳಿ ಪಟ್ಟಣದಲ್ಲಿ ನಿನ್ನೆ ರಾತ್ರಿ ಆರ್ ಎಸ್ಎಸ್ ಕಾರ್ಯಕರ್ತರು ಆರ್ ಎಸ್ಎಸ್ ಪಥಸಂಚಲನ ಮಾರ್ಗ ವೀಕ್ಷಣೆಗೆ ತೆರಳಿದ್ದ ವೇಳೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಓರ್ವ ಆರ್ ಎಸ್ ಎಸ್ ಕಾರ್ಯಕರ್ತನ ತಲೆಗೆ ಗಾಯವಾಗಿದ್ದು, 3-4 ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪ್ರಕರಣ ಸಂಬಂಧ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ನಡೆದ ಗಲಾಟೆ ವಿಡಿಯೋ ವೈರಲ್ ಆಗಿದ್ದು, ಪ್ರಕರಣ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಟ್ಟೀಹಳ್ಳಿ ಪಟ್ಟಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಹಾವೇರಿ ಎಸ್ ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.