ಬೆಂಗಳೂರು : ರಾಜ್ಯದ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷ ಕಾಲ ಧ್ಯಾನ ಮಾಡಿಸಲು ಅಗತ್ಯ ಕ್ರಮ ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಪತ್ರ ಬರೆದು ಶಾಲೆಗಳಲ್ಲಿ ಮಕ್ಕಳಿಗೆ ಧನ್ಯಾ ಮಾಡಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಸಚಿವರು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ರಾಜ್ಯದಲ್ಲಿನ ಎಲ್ಲಾ ಶಾಲೆ-ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನಿತ್ಯ ಧ್ಯಾನ ಮಾಡಿಸಲು ಸಮಯ ನಿಗದಿಪಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.