ಬೆಂಗಳೂರು : ದೇವನಹಳ್ಳಿ ಬಳಿ ಇರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪ್ರತಿಷ್ಠಾಪಿಸುತ್ತಿರುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಗೊಳಿಸಲು ನವೆಂಬರ್ 10 ರಂದು ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.
ನವೆಂಬರ್ 10 ರಂದು ನಡೆಯುವ ಕೆಂಪೇಗೌಡರ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದ್ದು, ಅವರು ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
BIGG NEWS : ಪೋಕ್ಸೋ ಪ್ರಕರಣ : ಮುರುಘಾಶ್ರೀಗಳಿಗೆ ಮತ್ತೆ ಅ.10ರವರೆಗೆ ನ್ಯಾಯಾಂಗ ಬಂಧನ
ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸುವ ಯೋಜನೆಯನ್ನು 2019 ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದರು. ನಂತರ ಸಿಎಂ ಬೊಮ್ಮಾಯಿ ಅವರು ಈ ಪ್ರತಿಮೆ ಜೊತೆಗೆ ಥೀಮ್ ಪಾರ್ಕ್ ಅಭಿವೃದ್ಧಿಪಡಿಸುವ ತೀರ್ಮಾನ ಕೈಗೊಂಡಿದ್ದಾರೆ.