ಬೆಂಗಳೂರು : ರಾಜ್ಯದಲ್ಲಿ ಇನ್ನೂ 1,454 ಗ್ರಾಮಗಳಿಗೆ ಶವಸಂಸ್ಕಾರಕ್ಕೆ ಸ್ಮಶಾನ ಸೌಲಭ್ಯವಿಲ್ಲ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
BIGG NEWS : 2017 ನೇ ಸಾಲಿನ `KAS’ ಫಲಿತಾಂಶ ಪ್ರಕಟ : ಪಾಸಾದ ಅಭ್ಯರ್ಥಿಗಳ ಪೂರ್ಣ ಪಟ್ಟಿ ಇಲ್ಲಿದೆ.!
ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಲಿಸಿರುವ ದಾಖಲೆಗಳನ್ನು ಒದಗಿಸಿದ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.
Rain In Karnataka : ರಾಜ್ಯಾದ್ಯಂತ 2 ದಿನ ಭಾರೀ ಮಳೆ : 12 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
ಶವ ಸಂಸ್ಕಾರಕ್ಕೆ ಜಾಗ ಇಲ್ಲದ ಗ್ರಾಮಗಳು ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಿರುವ ಬಗ್ಗೆ ರಾಜ್ಯದ ಎಲ್ಲಾ 31 ಜಿಲ್ಲೆಗಳ ಸಮಗ್ರ ಮಾಹಿತಿಯನ್ನು ಸರ್ಕಾರ ಒದಗಿಸಿದೆ. ರಾಜ್ಯದ ಒಟ್ಟು 29,616 ಗ್ರಾಮಗಳ ಪೈಕಿ ಈವರೆಗೆ 27,099 ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಒದಗಿಸಲಾಗಿದ್ದು, ಇನ್ನು 1,454 ಗ್ರಾಮಗಳಿಗೆ ಸ್ಮಶಾನ ಸೌಲಭ್ಯವಿಲ್ಲ ಎಂದು ಹೈಕೋರ್ಟ್ ಮುಂದೆ ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.