ಭಟ್ಕಳ : ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ 14,575 ಮನೆಗಳಿಗೆ ಭಾಗಶಃ ಹಾನಿಯಾಗಿದೆ, 14 ಜಿಲ್ಲೆಗಳಲ್ಲಿ 21,431 ಹೆಕ್ಟೇರ್ ಪ್ರದೇಶದ ಕೃಷಿ ಭೂಮಿಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಭಟ್ಕಳದ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಬುಧವಾರದವರೆಗೆ 600 ಮನೆಗಳು ಸಂಪೂರ್ಣ ಕುಸಿದಿದ್ದು, 2,312 ಮನೆಗಳು ಹೆಚ್ಚಿನ ಹಾನಿಯಾಗಿದೆ.ಒಟ್ಟಾರೆ 14,575 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಎಂದು ತಿಳಿಸಿದ್ದಾರೆ.
BIGG NEWS : ರಾಜ್ಯದ 6,601 ‘ಸರ್ಕಾರಿ ಶಾಲೆ’ಗಳಿಗೆ ಹೊಸ ಕೊಠಡಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
14 ಜಿಲ್ಲೆಗಳಲ್ಲಿ 21,431 ಹೆಕ್ಟೇರ್ ಪ್ರದೇಶದ ಕೃಷಿ ಭೂಮಿಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಸಮರ್ಪಕವಾದ ವರದಿ ಬಂದ ನಂತರ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಮಳಪೀಡಿತ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು 500 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
BIGG NEWS : ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ : `ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಭಾಗಿ