ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಬೆಂಗಳೂರು ವಿಭಾಗದ 11 ಶೈಕ್ಷಣಿಕ ಜಿಲ್ಲೆಗಳಿಗೆ ಅನ್ವಯಿಸುವಂತೆ 1:2 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು ವಿಭಾಗದ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳಿಗೆ ಸಂಬಂಧಿಸಿದ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗಗಳಿಗೆ ಸಂಬಂಧಿಸಿದ ಜಿಲ್ಲೆಗಳ ಅಭ್ಯರ್ಥಿಗಳ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಸೆಪ್ಟೆಂಬರ್ 29 ರಂದು ಪ್ರಕಟಿಸುವುದಾಗಿ ಇಲಾಖೆ ತಿಳಿಸಿದೆ. ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲೆಯ ಉಪ ನಿರ್ದೇಶಕರು ಹಾಗೂ ನೇಮಕಾತಿ ಪ್ರಾಧಿಕಾರದ ಕಚೇರಿಯಲ್ಲಿ ತಮ್ಮ ಮೂಲ ದಾಖಲೆಗಳನ್ನು ಪರಿಶೀಲನೆಗೆ ಹಾಜರಾಗುವುದು . ಈ ವೇಳಾಪಟ್ಟಿಯನ್ನು ಸೆ. 30 ರಂದು ಪ್ರಕಟಿಸಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.