ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರವೇ 1:2 ಅನುಪಾತದ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್, ಶಿಕ್ಷಕರ ಹುದ್ದೆಗಳ ಭರ್ತಿಗೆ ಉತ್ತೀರ್ಣ ಅಭ್ಯರ್ಥಿಗಳ ಸಿಇಟಿ ಫಲಿತಾಂಶ,ಶಿಕ್ಷಕರ ಶಿಕ್ಷಣ ಮತ್ತು ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶದಲ್ಲಿ ನಿಗದಿತ ಅಂಕಗಳನ್ನು ಪರಿಗಣಿಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ದಪಡಿಸಲಾಗುತ್ತದೆ. 1:2 ಅನಪಾತದಲ್ಲಿ ಅಂದರೆ ಒಂದು ಹುದ್ದೆಗೆ ಇಬ್ಬರು ಅಭ್ಯರ್ಥಿಗಳ ಹೆಸರಿನಂತೆ ಪಟ್ಟಿ ಪ್ರಕಟಿಸಲಾಗುವುದು. ಬಳಿಕ ದಾಖಲೆಗಳ ಪರಿಶೀಲನೆ ನಡೆಸಿ ಅರ್ಹತೆಗಳನ್ನು ಪರಿಶೀಲಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
BREAKING NEWS : ಬೆಂಗಳೂರು ನಗರದಲ್ಲಿ ಮಹಾಮಳೆಗೆ ಯುವತಿ ಬಲಿ : ವಿದ್ಯುತ್ ಸ್ಪರ್ಶಿಸಿ ಬಿಕಾಂ ಪದವೀಧರೆ ಸಾವು
ಪೊಲೀಸ್ ಕಾನ್ಸ್ ಟೇಬಲ್, ಸಬ್ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ