ಮೈಸೂರು : ವಿವಾದಿತ ಮೈಸೂರಿನ ಗುಂಬಜ್ ಬಸ್ ನಿಲ್ದಾಣ ವಿಚಾರ ಸಂಬಂಧ ಶೆಲ್ಟರ್ ನಲ್ಲಿದ್ದ ಮೂರು ಗೋಪುರದಲ್ಲಿ 2 ಚಿಕ್ಕ ಗೋಪುರಗಳನ್ನು ತೆರವುಗೊಳಿಸಲಾಗಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಶಾಸಕ ಎಸ್.ಎ. ರಾಮದಾಸ್, ಅರಮನೆ ಮಾದರಿ ನಿರ್ಮಾಣ ನನ್ನ ಉದ್ದೇಶವಾಗಿತ್ತು. ಆದರೆ ಅನವಶ್ಯಕ ಧರ್ಮದ ಲೇಪನ ನೀಡಿದ್ದು ನನಗೆ ನೋವಾಗಿದೆ. ಹೀಗಾಗಿ ವಿವಾದಿತ ಕೇಂದ್ರವಾಗಬಾರದು ಎಂಬ ಉದ್ದೇಶದಿಂದ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಗೋಪುರ ತೆರವುಗೊಳಿಸಿರುವುದಾಗಿ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದ ಪ್ರತಾಪ್ ಸಿಂಹ, ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದೀನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗು ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದೀನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗು ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೂ ಧನ್ಯವಾದಗಳು. pic.twitter.com/9b1wPLULJ4
— Pratap Simha (@mepratap) November 27, 2022