ಬೆಳಗಾವಿ : ರಾಜ್ಯದಲ್ಲಿ ಶೀಘ್ರವೇ 250 ಕಿರಿಯ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಸುವರ್ಣ ವಿಧಾನಸೌಧದಲ್ಲ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಸಂಚಾರಿ ಪಶುಚಿಕಿತ್ಸಾ ಘಟಕಗಳ ಲೋಕಾರ್ಪಣೆ ಹಾಗೂ ಇಲಾಖೆಯ ಪಶುವೈದ್ಯಕೀಯ ಸ್ಪೆಷಾಲಿಟಿ ಆಸ್ಪತ್ರೆ, 82 ಪಶು ಸಂಜೀವನಿ ಆ್ಯಂಬುಲೆನ್ಸ್, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಶೀಘ್ರವೇ 250 ಕಿರಿಯ ಪಶುವೈದ್ಯಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಾನು 20 ಸಾವಿರ ಗೋವುಗಳನ್ನು ರಕ್ಷಿಸಿ ಗೋಶಾಲೆಗೆ ಕಳುಹಿಸಿದ್ದೇನೆ. ಗೋ ಹತ್ಯೆ ನಿಷೇಧ ಕಾ್ಯದೆ ಉಲ್ಲಂಘಿಸಿದವರ ವಿರುದ್ಧ 900 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರತಿ ಜಿಲ್ಲೆಗೊಂದು ಗೋಶಾಲೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
BIGG NEWS : ರಾಜ್ಯದಲ್ಲಿ ಹೋಬಳಿಗೊಂದು ಮಾದರಿ ಸರ್ಕಾರಿ ಶಾಲೆ ಸ್ಥಾಪನೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್