ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸಂಬಂಧ ಇಂದು ಸಂಜೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಇಂದು ಸಂಜೆ ಸುವರ್ಣಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಪಾದಯಾತ್ರೆ ಹೋರಾಟ ಆರಂಭಿಸಿದೆ. ರಾಜ್ಯ ಸರ್ಕಾರ ಕೊಟ್ಟ ಮಾತು ತಪ್ಪಿದ ಹಿನ್ನೆಲೆಯಲ್ಲಿ ಮತ್ತೆ ಪಾದಯಾತ್ರೆ ಆರಂಭಿಸಿದ್ದೇವೆ.ಸುವರ್ಣ ವಿಧಾನಸೌಧ ತಲುಪುವುದರೊಳಗಾಗಿ ಮೀಸಲಾತಿ ಘೋಷಣೆ ಮಾಡಿ ಇಲ್ಲವಾದಲ್ಲಿ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.