ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯವಾಗಿದೆ.

BIGG NEWS : ಹರ್‌ ಘರ್‌ ತಿರಂಗ ಅಭಿಯಾನ : ‘ನೋಡಲ್‌ ಅಧಿಕಾರಿ’ಗಳಾಗಿ ಆಯಾ ಜಿಲ್ಲಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಇನ್ನೂ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ದ್ವೀತಿಯ ಪಿಯು ಪೂರಕ ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ.

Good News : `ಅಕ್ರಮ-ಸಕ್ರಮ’ ಯೋಜನೆ ತಿಂಗಳೊಳಗೆ ಅಧಿಸೂಚನೆ : ಸಚಿವ ಭೈರತಿ ಬಸವರಾಜ

ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ವಲಯದ ಒಳಗೆ ಪರೀಕ್ಷಾರ್ಥಿಗಳು ಮತ್ತು ಸಂಬಂಧಪಟ್ಟವರನ್ನು ಹೊರತುಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ.

ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಸದಸ್ಯರಾಗಿರುವರು. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತು ಕೂಡ ಕೈಗೊಳ್ಳಲಾಗಿದೆ.

JOBS NEWS: ಬೆಂಗಳೂರಿನಲ್ಲಿ ನವೆಂಬರ್ 1-3 ರಿಂದ ಮಹಿಳೆಯರಿಗೆ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ
ದಿನಾಂಕ 12-08-2022 – ಕನ್ನಡ, ಅರೇಬಿಕ್
ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ದಿನಾಂಕ 16-08-2022 – ಹಿಂದಿ
ದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 19-08-2022 -ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
ದಿನಾಂಕ 20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ದಿನಾಂಕ 22-08-2022 – ಇಂಗ್ಲೀಷ್
ದಿನಾಂಕ 23-08-2022 – ಅರ್ಥಶಾಸ್ತ್ರ, ಜೀವಶಾಸ್ತ್ರ
ದಿನಾಂಕ 24-08-2022-ಇತಿಹಾಸ, ಸಂಖ್ಯಾಶಾಸ್ತ್ರ
ದಿನಾಂಕ 25-08-2022 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Share.
Exit mobile version