ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೊರ್ಬಿ ಸೇತುವೆ ಕುಸಿತ ದುರಂತ: ಐದು ದಿನಗಳ ನಂತ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಅಂತ್ಯ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಮಹಿಳೆಯರು ನೀರಿನಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ದಲಿತ ಕಾಲೋನಿಯ ಮಂಗೇರ ತಿಪ್ಪಮ್ಮ (70), ಮಕ್ಕಳಾದ ಮಾರಕ್ಕ (55) ಹಾಗೂ ದ್ಯಾಮಕ್ಕ (35) ಎಂದು ಗುರುತಿಸಲಾಗಿದೆ.
ತಿಪ್ಪಮ್ಮನ ಗಂಡ ಕೆಂಚಪ್ಪ ಒಂದು ವರ್ಷದ ಹಿಂದೆ ಮೃತಪಟ್ಟಿದ್ದರು. ತಿಂಗಳ ಹಿಂದೆ ಮಗ ದ್ಯಾಮಣ್ಣ ಮೃತಪಟ್ಟಿದ್ದರಿಂದ ಮನೆಯ ನಿರ್ವಹಣೆ ಕಷ್ಟವಾಗಿತ್ತು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
BIGG NEWS : `APL-BPL’ ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್!