ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಒಂದೇ ವಾರದಲ್ಲಿ ಮಳೆಗೆ ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.
ರಾಜ್ಯಾದ್ಯಂತ ಕಳೆದೊಂದು ವಾರದಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.ಆಗಸ್ಟ್ 01 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಅನಾಹುತಗಳಲ್ಲಿ ಒಟ್ಟು 27 ಮಂದಿ ಮೃತಪಟ್ಟಿದ್ದರು. ಭಾನುವಾರ ಮತ್ತೆ 5 ಮಂದಿ ಮೃತಪಟ್ಟಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ತುಸು ತಗ್ಗುವ ಲಕ್ಷಣಗಳಿವೆ. ಆದರೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ಬುಧವಾರದವರೆಗೆ ಆರೆಂಜ್ ಅಲರ್ಟ್ ಇರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಬುಧವಾರದವರೆಗೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
BIGG NEWS : ಬಳ್ಳಾರಿಯಲ್ಲಿ ಕಲುಷಿತ ನೀರು ಸೇವನೆಯಿಂದ 80 ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಶಿವಮೊಗ್ಗ, ಹಾಸನ, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಮೂರು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಬುಧವಾರ ಬೆಳಗ್ಗೆ 8.30 ರಿಂದ ಶುಕ್ರವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Shocking news : ಬೆಂಗಳೂರಿನಲ್ಲಿ ಹಸುಗಳ ಜೊತೆ ವಿಕೃತಿ ಮೆರೆದಿದ್ದ ಸೈಕೋಪಾಥ್ ಅರೆಸ್ಟ್!