ಬೆಂಗಳೂರು : ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ನೇರಪಾವತಿ ಪೌರ ಕಾರ್ಮಿಕರನ್ನು ಕಾಯಂ ಮಾಡುವ ಹಿನ್ನೆಲೆಯಲ್ಲಿ ಬಿಬಿಎಂಪಿ (ಪೌರ ಕಾರ್ಮಿಕರ ನೇಮಕಾತಿ)(ವಿಶೇಷ) ನಿಯಮಗಳು 2022 ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಇರುವ 3,763 ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಈ ನಿಯಮಗಳು ಸಂಬಂಧಿಸಿವೆ. ನೇಮಕಾತಿ ಪ್ರಾಧಿಕಾರದ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಮುಖ್ಯ ಆಯುಕ್ತರಿರುತ್ತಾರೆ. ವಿಶೇಷ ಆಯುಕ್ತರು, ಜಂಟಿ ಆಯುಕ್ತರು ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡಂತೆ 9 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
BIGG NEWS : ರಾಜ್ಯ ಸರ್ಕಾರದಿಂದ `ಅನರ್ಹ ಪಿಂಚಣಿದಾರ’ರಿಗೆ ಬಿಗ್ ಶಾಕ್ : 7 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿ ರದ್ದು!
ಪೌರ ಕಾರ್ಮಿಕರನ್ನು ಕಾಯಂ ಮಾಡುವ ಹಿನ್ನೆಲೆಯಲ್ಲಿ ಬಿಬಿಎಂಪಿ (ಪೌರ ಕಾರ್ಮಿಕರ ನೇಮಕಾತಿ)(ವಿಶೇಷ) ನಿಯಮಗಳು 2022 ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಅಕ್ಟೋಬರ್ 2 ರೊಳಗೆ ಅಪರ ಮುಖ್ಯ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸುವಂತೆ ತಿಳಿಸಲಾಗಿದೆ.