ಬೆಂಗಳೂರು : ದೊಡ್ಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶಕ್ಕೆ 4,500 ಸರ್ಕಾರಿ ಬಸ್ ಗಳನ್ನು ಬುಕ್ ಮಾಡಲಾಗಿದ್ದು, ಕೋಲಾರ-ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ ಬಸ್ ಗಳಿಲ್ಲದೇ ಜನರು ಪರದಾಡುವಂತಾಗಿದೆ.
BIGG NEWS : ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ, ಕಮಿಷನ್ ಸಮಾವೇಶ : ಕಾಂಗ್ರೆಸ್ ವಾಗ್ದಾಳಿ
ಇಂದು ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಬಿಜೆಪಿಯ ಸಾಧನಾ ಸಮಾವೇಶ ಜನಸ್ಪಂದನ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 4,500 ಸರ್ಕಾರಿ ಬಸ್ ಗಳನ್ನು ಬುಕ್ ಮಾಡಲಾಗಿದೆ. ಹೀಗಾಗಿ ಕೋಲಾರ-ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ಗಳ ಸಂಚಾರವಿಲ್ಲದೇ ಜನರು ಪರದಾಡುವಂತಾಗಿದೆ.
ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯಲಿರುವ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.