ಕಲಬುರಗಿ : ತಾಲೂಕಿನ ಹಾವನೂರು ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿ 46 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
46 ವಿದ್ಯಾರ್ಥಿಗಳಲ್ಲಿ 8 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ. ಶಾಲೆಯಲ್ಲಿ 158 ವಿದ್ಯಾರ್ಥಿಗಳಿದ್ದು, ಅದರಲ್ಲಿ 46 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಪೋಷಕರು ಮತ್ತು ಶಿಕ್ಷಕರು ತಕ್ಷಣ ಅಸ್ವಸ್ಥ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಗೊಬ್ಬೂರು (ಬಿ) ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಮಧ್ಯಾಹ್ನದ ಬಿಸಿಯೂಟ ಜಿಲ್ಲಾ ಅಧಿಕಾರಿ ಭರತಜ್ ಸಾವಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕಿರಣ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
BREAKING NEWS: ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ; ಪೋಷಕರಲ್ಲಿ ಆತಂಕ