ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಚಿವ ಹಾಲಪ್ಪ ಆಚಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹಾಲಪ್ಪ ಅಚಾರ್, ಬಾನಾಪುರ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ದೇವಪ್ಪ, ಗಿರಿಜಮ್ಮ, ಪಾರವ್ವ, ಶಾಂತವ್ವ, ಗಿರಿಜಮ್ಮ ಮೃತಪಟ್ಟಿದ್ದಾರೆ. ಮೃತಪಟ್ಟ ಕುಟುಂಬಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ಬಳಿ ತಡರಾತ್ರಿ ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯವಾಗಿದೆ.