ಬೆಂಗಳೂರು : ರಾಜ್ಯ ಸರ್ಕಾರವು 1 ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿದ್ದು, 1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಾಡಿದೆ.
ರಾಜ್ಯ ಸರ್ಕಾರವು 2025-26 ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 1 ನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.