ಕಲಬುರಗಿ : ನಿಜಾಮರ ಆಡಳಿತದಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ವಿಮೋಚನೆ ಆಗಿ ಇಂದಿಗೆ 74 ವರ್ಷಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಒಂದು ವರ್ಷ ನಡೆಯಲಿರುವ ಅಮೃತಮಹೋತ್ಸವದ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಮುನಿರತ್ನ, ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ವಿದ್ಯಾಸಾಗರ ಎ. ಶಹಾಬಾದಿ, ಕಲಬುರಗಿ ನೀರಾವರಿ ಯೋಜನೆಗಳ ವಲಯದ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಗಳೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ ಖರ್ಬಿಕರ್, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ. ಫಹೀಮ್, ಕಲಬುರಗಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ ಹಾಗೂ ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಗರಿಮಾ ಪನ್ಮಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲ್ಯಾಣ ಕರ್ನಾಟಕ ಉತ್ಸವ ಪ್ರಯುಕ್ತ ಕರಾರು ಒಪ್ಪಂದದ ಮೇರೆಗೆ 300 ಸಾರಿಗೆ ಬಸ್ಗಳು : ಬಸ್ ಸಂಚಾರದಲ್ಲಿ ವ್ಯತ್ಯಯ
ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ಜರುಗಲಿರುವ ಪ್ರಯುಕ್ತ ಕಲಬುರಗಿ ವಿಭಾಗ-2 ಹಾಗೂ ವಿಭಾಗ-1 ರಿಂದ ಕರಾರು ಒಪ್ಪಂದದ ಮೇಲೆ ಸುಮಾರು 300 ಸಾರಿಗೆ ಬಸ್ಸುಗಳು ನೀಡಲಾಗಿದೆ. ಆದ್ದರಿಂದ ನಿಗಮದ ಕಲಬುರಗಿ ವಿಭಾಗ-2 ರಿಂದ ಕಾರ್ಯಾಚರಣೆಯಾಗುವ ಬಸ್ಗಳು ಅಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ನಿಗಮ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಕಲಬುರಗಿ, ಆಳಂದ, ಜೇವರ್ಗಿ, ಯಡ್ರಾಮಿ ಅಪಜಲಪುರ, ಸೇಡಂ, ಕಾಳಗಿ, ಚಿಂಚೋಳ್ಳಿ, ಹಾಗೂ ಚಿತಾಪೂರ ತಾಲೂಕುಗಳ ಸಾರ್ವಜನಿಕ ಪ್ರಯಾಣಿಕರು ಇದಕ್ಕೆ ಸಹಕರಿಸಬೇಕು. ನಂತರ ಅಂದು ಮಧ್ಯಾಹ್ನ 2 ಗಂಟೆಯಿಂದ ಯಥಾ ಪ್ರಕಾರ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.