ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಜೆಇ ಮಿದುಳು ಜ್ವರ ನಿಯಂತ್ರಣಕ್ಕಾಗಿ ವಿಶೇಷ ಲಸಿಕಾ ಅಭಿಯಾನದಡಿ 8.41 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಬಾಗಲಕೋಟೆ, ಗದಗ, ಕಲಬುರಗಿ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ತುಮಕೂರು, ರಾಮನಗರ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸೋಮವಾರದಿಂದ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 1-15 ವರ್ಷ ವಯಸ್ಸಿನ ಮಕ್ಕಳಿಗೆ ಒಂದು ಡೋಸ್ ಲಸಿಕೆ ನೀಡಲಾಗುತ್ತಿದೆ.
ವಿಶೇಷ ಲಸಿಕಾ ಅಭಿಯಾನದಡಿ ಮೊದಲ ದಿನ 4,22,932 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಎರಡನೇ ದಿನ 4,18,272 ಮಕ್ಕಳು ಸೇರಿ ಒಟ್ಟಾರೆ 8,41,204 ಮಕ್ಕಳು ಲಸಿಕೆ ಪಡೆದುಕೊಂಡಿದ್ದಾರೆ.
Rain In Karnataka : ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಳೆಯಿಂದ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ