ಹಾವೇರಿ : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ಇಂದು ಬೆಳಗ್ಗೆ 9 ಗಂಟೆಯಿಂದ ಹಲವು ಗೋಷ್ಠಿಗಳು ನಡೆಯಲಿದ್ದು, ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸಂಜೆ 5 ರಿಂದ 8-30ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಗೌರವ ಉಪಸ್ಥಿತಿಯಲ್ಲಿ, ಗೌರವ ಅತಿಥಿಗಳಾಗಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿ, ಕರ್ನಾಟಕ ವಿಧಾನಸಭೆ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯಸಭಾ ಸದಸ್ಯ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಎ.ನಾರಾಯಣಸ್ವಾಮಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಖಾತೆ ಸಚಿವ ಬಿ.ಸಿ.ನಾಗೇಶ ಅವರು ಭಾಗವಹಿಸಲಿದ್ದಾರೆ.
ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡರು ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವರು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ ಕಟೀಲ್, ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕರ್ನಾಟಕ ರಾಜ್ಯ ಜಾತ್ಯತೀತ ಜನತಾದಳ ಅಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಂಸದರಾದ ಐ.ಜಿ.ಸನದಿ, ಮಂಜುನಾಥ ಕುನ್ನೂರ, ಮಾಜಿ ಶಾಸಕರಾದ ಯು.ಬಿ.ಬಣಕಾರ, ಶಿವರಾಜ ಸಜ್ಜನ, ಸುರೇಶಗೌಡ ಬ.ಪಾಟೀಲ, ಬಿ.ಎಚ್.ಬನ್ನಿಕೋಡ, ಅಜಿಂಪೀರ ಖಾದ್ರಿ, ಡಿ.ಎಂ.ಸಾಲಿ, ಸೋಮಣ್ಣ ಬೇವಿನಮರದ ಅವರು ಪಾಲ್ಗೊಳ್ಳಲಿದ್ದಾರೆ. ನಂತರ ರಾತ್ರಿ 10ಗಂಟೆ ವರೆಗೆ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿವೆ.
ವೇದಿಕೆ-2: ಗೋಷ್ಠಿ-09 ವಿದೇಶದಲ್ಲಿ ಕನ್ನಡ ಡಿಂಡಿಮ ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ಜರುಗಲಿದೆ. ಕಸಪಾ ಅಂತಾರಾಷ್ಟ್ರೀಯ ಘಟಕಗಳ ಸಲಹಾ ಸಮಿತಿ ಸದಸ್ಯರಾದ ಡಾ.ಆರತಿ ಕೃಷ್ಣ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ದುಬೈನ ಸರ್ವೋತ್ತಮ ಶೆಟ್ಟಿ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ವಿದೇಶದಲ್ಲಿ ಕನ್ನಡ ಸಂಘಗಳ ಕಂಪು ಕುರಿತು ಜರ್ಮನಿಯ ರವೀಂದ್ರ ಕುಲಕರ್ಣಿ, ಕನ್ನಡಕ್ಕೆ ವಿದೇಶಿಯರ ಕೊಡುಗೆ ಬಗ್ಗೆ ಎಸ್.ಎಲ್.ಶ್ರೀನಿವಾಸಮೂರ್ತಿ ಹಾಗೂ ಅಮೆರಿಕದ ಶ್ರೀಮತಿ ಜ್ಯೋತಿ ಮಹಾದೇವ ಅವರು ವಿದೇಶದಲ್ಲಿ ಕನ್ನಡ ಸಾಹಿತಿಗಳು ಕುರಿತು ಮಾತನಾಡಲಿದ್ದಾರೆ.
ಗೋಷ್ಠಿ-10: ಕನ್ನಡ ಸಾಹಿತ್ಯದಲ್ಲಿ ವಿಷಯ ವೈವಿಧ್ಯ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಜರುಗಲಿದೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ಹಂಪ ನಾಗರಾಜಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದು, ಬಾಗಲಕೋಟೆಯ ಹಿರಿಯ ಪ್ರಾಧ್ಯಾಪಕ ಡಾ.ವಿಜಯಕುಮಾರ ಕಟಗಿಹಳ್ಳಿಮಠ ಆಶಯ ನುಡಿಗಳನ್ನಾಡಲಿದ್ದಾರೆ. ಯಕ್ಷಗಾನ ಸಾಹಿತ್ಯ ಕುರಿತು ಡಾ.ಆನಂದರಾಮ ಉಪಾಧ್ಯ, ವೈದ್ಯ ಸಾಹಿತ್ಯ ಕುರಿತು ನಾಡೋಜ ಡಾ.ಬಿ.ಟಿ.ರುದ್ರೇಶ್, ಚುಟುಕು ಸಾಹಿತ್ಯ ಕುರಿತು ಕೃಷ್ಣಮೂರ್ತಿ ಕುಲಕರ್ಣಿ ಹಾಗೂ ಬಯಲಾಟ ಸಾಹಿತ್ಯ ಕುರಿತು ಡಾ.ಕೆ.ರುದ್ರಪ್ಪ ಅವರು ಮಾತನಾಡಲಿದ್ದಾರೆ.
ಗೋಷ್ಠಿ-11: ವಿಜ್ಞಾನ, ಮಾಹಿತಿ ಮತ್ತು ತಂತ್ರಜ್ಞಾನ ದೊಂದಿಗೆ ಕನ್ನಡ ಮಧ್ಯಾಹ್ನ 1 ರಿಂದ 3ರವರೆಗೆ ಜರುಗಲಿದೆ. ಹಿರಿಯ ಮಾಹಿತಿ ತಂತ್ರಜ್ಞಾನ ಸಲಹೆಗಾರ ಡಾ.ಉದಯಶಂಕರ ಪುರಾಣಿಕ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ವಿಜ್ಞಾನ ಬರಹಗಾರ ಡಾ.ಎಂ.ಆರ್.ನಾಗರಾಜ್ ಅವರು ಆಶಯ ನುಡಿಗಳನ್ನಾಡಲಿದ್ದಾರೆ.
ಕನ್ನಡದಲ್ಲಿ ಮಾಹಿತಿ ತಂತ್ರಜ್ಞಾನ ಕುರಿತು ಅವಿನಾಶ್ ಬಿ., ತಂತ್ರಜ್ಞಾನದ ಹೊಸ ಆವಿಷ್ಕಾರಗಳ ಅಳವಡಿಕೆ ಕುರಿತು ಅನಂತ ನಾಗರಾಜ್ ಹಾಗೂ ಕನ್ನಡ ಸಾಹಿತ್ಯದಲ್ಲಿ ಮಾಹಿತಿ ತಂತ್ರಜ್ಞಾನ ಕುರಿತು ಶ್ರೀಮತಿ ಕ್ಷಮಾ ಭಾನುಪ್ರಕಾಶ್ ಮಾತನಾಡಲಿದ್ದಾರೆ.
ಗೋಷ್ಠಿ-12: ಜಾನಪದ ಜಗತ್ತು ಮಧ್ಯಾಹ್ನ 3 ರಿಂದ 5ರವರೆಗೆ ಜರುಗಲಿದೆ. ಗೊಟಗೋಡಿ ಜಾನಪದ ವಿವಿ ಕಲಪತಿಗಳಾದ ಡಾ.ಟಿ.ಎಂ.ಭಾಸ್ಕರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಜಾನಪದ ತಜ್ಞ ಡಾ.ಶ್ರೀಪಾದ ಶೆಟ್ಟಿ ಆಶಯ ನುಡಿಗಳನ್ನಾಡಲಿದ್ದಾರೆ. ಜನಪದ ಸಾಹಿತ್ಯ ಪ್ರಭೇದಗಳು ಕುರಿತು ಮಂಗಳೂರಿನ ಡಾ.ಕೆ.ಅಭಯಕುಮಾರ್, ಜನಪದ ಕಲೆಗಳ ಪ್ರಕಾರಗಳು ಹಾಗೂ ಆರಾಧನೆಗಳು ಕುರಿತು ವೆಮಗಲ್ ನಾರಾಯಣಸ್ವಾಮಿ ಹಾಗೂ ಜನಪದದ ಪ್ರಸ್ತುತತೆ ಕುರಿತು ಡಾ.ಕೆ.ಸೌಭಾಗ್ಯವತಿ ಅವರು ಮಾತನಾಡಲಿದ್ದಾರೆ. ಸಂಜೆ 7 ರಿಂದ ರಾತ್ರಿ 10ರವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.