ಹಾವೇರಿ : ಹಾವೇರಿಯಲ್ಲಿ ಜನವರಿ 6,7 ಮತ್ತು 8 ರಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಜನವರಿ 6 ಮತ್ತು 7 ರಂದು ಹಾವೇರಿಯ ಐದು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಹಾವೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾವೇರಿ, ಗುಡ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್ ಜೆ.ಎಂ ಪದವಿ ಪೂರ್ವ ಕಾಲೇಜು, ಎಸ್ಎಂಎಸ್ ಪದವಿ ಪೂರ್ವ ಕಾಲೇಜು ಸೇರಿ ಒಟ್ಟು ಐದು ಕಾಲೇಜಿಗೆ ರಜೆ ನೀಡಲಾಗಿದೆ.
ಇನ್ನು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಷರತ್ತು ಬದ್ಧ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.