ಬೆಂಗಳೂರು : ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೇ ದಿನ 9 ಮಂದಿ ಬಲಿಯಾಗಿದ್ದಾರೆ.
BIGG NEWS : ಹೃದಾಯಾಘದಿಂದ ಸಚಿವ ಉಮೇಶ್ ಕತ್ತಿ ನಿಧನ : ಇಂದು ಹುಟ್ಟೂರಾದ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಧಾರವಾಡ, ಹಾವೇರಿ, ಗದಗ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಜನವಸತಿ ನೀರು ನುಗ್ಗಿರುವುದರಿಂದ ಆಸ್ತಿಪಾಸ್ತಿಗೆ ನಷ್ಟವಾಗಿದೆ.
ಮಳೆ ಕಾರಣಗಳಿಗಾಗಿ ರಾಜ್ಯದಲ್ಲಿ ನಿನ್ನೆ ಒಂದೇ ದಿನ 9 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಸಿದ್ದಾಪುರದಲ್ಲಿ ವರ್ತೂರು ಕೆರೆ ಕೊಡಿ ಬಿದ್ದು ನೀರು ಹರಿಯುತ್ತಿದ್ದ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಸಿದ್ದಾಪುರದ ಅಖಿಲಾ (23) ಎಂಬ ಯುವತಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತೊಂಡಿಹಾಳದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ನಿಂಗಪ್ಪ ಹಲವಾಗಲಿ ಮತ್ತು ಮಹೇಶ್ ಎಂಬ ಇಬ್ಬರು ಪೊಲೀಸರು ನೀರಿನಲ್ಲಿ ಕೊಚ್ಚಿಕೊಂಡುಉ ಹೋಗಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದಲ್ಲಿ ಹಳ್ಳ ದಾಟುತ್ತಿದ್ದ ಮಹಿಳೆ ನಾಗಮ್ಮ ಯಂಕಪ್ಪ ಕವಲೂರು (50) ನೀರುಪಾಲಾಗಿಇದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳದಲ್ಲಿ ಬಸವನಗೌಡ ಶಿವನಗೌಡ ತಿಪ್ಪಣ್ಣನವರ (35), ಶಿವಮೊಗ್ಗದ ಮಲವಗೊಪ್ಪದ ಇಂದಿರಾ ಕಾಲೋನಿ ನಿವಾಸಿ ಗೌರಮ್ಮ (62) ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಹನುಮಸಾಗರದ ಸಮೀಪ ಕಾಟಾಪುರ ಗ್ರಾಮದ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ ರೈತ ಸಣ್ಣನೀಲಪ್ಪ ಮಳಿಯಪ್ಪ ಹಾದಿಮನೆ (57), ಚಾಮರಾಜನಗರ ಜಿಲ್ಲೆ ಯಳಂದೂರು ಜಿಲ್ಲೆ ಕಸ್ತೂರ ಗ್ರಾಮದ ರಾಮದಾಸ ಶೇಟ್ಟಿ (44), ಹನೂರು ತಾಲೂಕಿನ ಮೀಣ್ಯಂ ಗ್ರಾಮದ ಮಾದಪ್ಪ (64) ಸಿಡಿಲಿಗೆ ಬಲಿಯಾಗಿದ್ದಾರೆ.