ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಮುಂದುವರೆದಿದ್ದು, ಜೂನ್ ನಿಂದ ಈವರೆಗೂ 96 ಜನರು ಮಳೆಗೆ ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ.
ಒಮ್ಮತದ ಲೈಂಗಿಕತೆಗೆ ಮೊದಲು ʻ ಆಧಾರ್, ಪ್ಯಾನ್ ʼ ಪರಿಶೀಲಿಸುವ ಅಗತ್ಯವಿಲ್ಲ : ದೆಹಲಿ ಹೈಕೋರ್ಟ್
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೂನ್ನಿಂದ ಈವರೆಗೂ ಮಳೆಯಿಂದ 96 ಜನ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯೊಳಗೆ ರಾಮನಗರ, ಬಳ್ಳಾರಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 992 ಮನೆಗಳು ಹಾನಿಯಾಗಿವೆ. 10, 274 ಅರ್ಧ ಮನೆ ಹಾನಿಯಾಗಿವೆ. ನಿನ್ನೆ ಒಂದೇ ದಿನದಲ್ಲಿ 148 ಮನೆಗಳು ಹಾನಿಯಾಗಿದ್ದು, 258 ಜಾನುವಾರುಗಳು ಸಾವನ್ನಪ್ಪಿವೆ ಎಂದು ಹೇಳಿದರು.
BIGG NEWS : ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ : ಇಂದು ಮಹಾಮಳೆಗೆ ನಾಲ್ವರು ಬಲಿ
ನೆರೆ ಸಂತ್ರಸ್ತರಿಗಾಗಿ ಕಂದಾಯ ಇಲಾಖೆಯಿಂದ 255 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ ನೀಡ್ತಿದ್ದಾರೆ. ಮಳೆಯಿಂದ ಮನೆಗಳಿಗೆ ಹಾನಿಯಾದರೆ ತಕ್ಷಣ ಪರಿಹಾರ ನೀಡಲಾಗುತ್ತದೆ. ಎಂದು ಮಾಹಿತಿ ನೀಡಿದ್ದಾರೆ.