ತುಮಕೂರು : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸಹಳ್ಳಿಯ ಮುರುಘಾಮಠದ ಶಾಖಾ ಮಠ ಪಡವಲ ಮಠದಿಂದ ಶಿಷ್ಯೆಯೊಬ್ಬರು ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಿತ್ರದುರ್ಗ ಮಠದ ಶಾಖಾ ಮಠ ತುಮಕೂರು ಜಿಲ್ಲೆಯ ಹೊಸಹಳ್ಳಿ ಪಡವಲ ಮಠದಿಂದ ಶಿಷ್ಯೆ ರೇವತಿ ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ರೇವತಿ ಮುರುಘಾ ಮಠದಲ್ಲೇ ವಿದ್ಯಾಭ್ಯಾಸ ಮಾಡಿ, ಪಡವಲ ಮಠದಲ್ಲಿ ಅಧಿಕಾರಿಯಾಗಿದ್ದರು.
ಪಡವಲ ಮಠದಲ್ಲಿ ಜಮೀನು ವಿಚಾರವಾಗಿ ಗ್ರಾಮಸ್ಥರು ಹಾಗೂ ರೇವತಿ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದ್ದು, ಇದೀಗ ಕಳೆದ ಒಂದು ತಿಂಗಳಿನಿಂದ ರೇವತಿ ನಾಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
BIGG NEWS : ರಾಜ್ಯದಲ್ಲಿ ಈ ಬಾರಿ ಬಿಜೆಪಿ ಗೆಲ್ಲುವುದು ಖಚಿತ : ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ
BIGG NEWS : ಹಾಸನದಲ್ಲಿ ಜೆಡಿಎಸ್ ಟಿಕೆಟ್ ಫೈಟ್ : `ಕರ್ನಾಟಕದ ಅಮ್ಮ ಭವಾನಿ ರೇವಣ್ಣ’ ಪೋಸ್ಟರ್ ವೈರಲ್