ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸಹಕಾರ ಸಂಘಗಳು, ಬ್ಯಾಂಕ್ ಗಳಿಗೆ ರೈತರು ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡದಂತೆ ಶೀಘ್ರವೇ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIG NEWS : ಇಂದು 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ | Bypolls results 2022
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಹೆಬ್ಬಾಳದ ಜಿಕೆವಿಕೆಯಲ್ಲಿ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಹಕಾರ ಸಂಘಗಳು, ಬ್ಯಾಂಕ್ ಗಳಿಂದ ರೈತರು ಸಾಲ ಪಡೆದು ಕೆಲವೊಮ್ಮೆ ಮರು ಪಾವತಿ ಮಾಡಲು ಆಗುವುದಿಲ್ಲ. ಇಂತಹ ಸಮಯದಲ್ಲಿ ರೈತರ ಆಸ್ತಿ ಜಪ್ತಿ ಆಗುವುದನ್ನು ತಡೆಯಲು ಕಾನೂನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಕರ್ನಾಟಕದಲ್ಲಿ ಜಾನುವಾರು ಸಾಗಣೆಗೆ ಆನ್ಲೈನ್ ಪಾಸ್ ಪರ್ಮಿಟ್ ಕಡ್ಡಾಯ
ರೈತರ ಸಾಲ ಮರುಪಾವತಿ ಆಗದಿದ್ದರೆ ಆಸ್ತಿ ಜಪ್ತಿ ಮಾಡದೇ ಸಮಯಾವಕಾಶ ನೀಡಬೇಕು ಎಂದು ಸಹಕಾರ ಮತ್ತು ಇತರೆ ಇಲಾಖೆಗಳಿಗೆ ಸೂಚನೆ ನೀಡಲಾಗಿದ್ದು, ಈ ಸಂಬಂಧ ಕಾನೂನು ತಜ್ಞರ ಜೊತೆಗೆ ಚರ್ಚೆ ಮಾಡಿ ಸಾಲ ಕಟ್ಟದ ರೈತರ ಆಸ್ತಿ ಜಪ್ತಿ ತಡೆಯಲು ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
BIG NEWS : ಇಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ