ಬೆಂಗಳೂರು : ರಾಜ್ಯದ ಗ್ರಾಮೀಣ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ತೆರೆಯಲು ನಿರ್ಧಾರ ಮಾಡಲಾಗಿದೆ, ಶಾಸಕರ ಅನುದಾನದಲ್ಲಿ ವಾಹನ ಕೊಡಿಸಲು ಚಿಂತನ ಮಾಡಲಾಗಿದೆ. ಮಕ್ಕಳಿಗೆ ಇಂದು ಇಂಗ್ಲಿಷ್ ಭಾಷೆ ಅನಿವಾರ್ಯವಾಗಿದೆ. ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಲು ವ್ಯವಸ್ಥೆ ಮಾಡಲಾಗಿದೆ. ಸದ್ಯ ಇಂಗ್ಲಿಷ್ ಶಿಕ್ಷಕರೇ ಸ್ಪೋಕನ್ ಇಂಗ್ಲಿಷ್ ಮಾಡುತ್ತಿದ್ದಾರೆ ಎಂದರು.
ಇನ್ನು ಪ್ರಸಕ್ತ ವರ್ಷದಿಂದಲೇ ನೈತಿಕ ಶಿಕ್ಷಣ ನೀಡುವ ಚಿಂತನೆ ಇದೆ. 1, 2 ಹಾಗೂ 3ನೇ ತರಗತಿಯಲ್ಲಿ ಎನ್ ಇಪಿ ಶಿಕ್ಷಣ ಅಳವಡಿಕೆಗೆ ತಯಾರಿ ಮಾಡಲಾಗುತ್ತಿದೆ. ಶಾಲಾ ಕೊಠಡಿ ಸರಿಮಾಡುವ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಹೊಸದಾಗಿ 7 ಸಾವಿರ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಶೇ 60% ರಷ್ಟು ಹೊಸ ಶಿಕ್ಷಕರ ಆಯ್ಕೆ ಮಾಡಿಕೊಳುತ್ತೇವೆ ಎಂದು ತಿಳಿಸಿದ್ದಾರೆ.