ಕೊಪ್ಪಳ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿಗೆ ಆಧಾರ ಯೋಜನೆಗೆ ಅರ್ಹ ವಿಕಲಚೇತನರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು (Suvidha website URL:https://suvidha.karnataka.gov.in/) ಪೋರ್ಟ್ಲ್ನಲ್ಲಿ 2023ರ ಜನವರಿ 15 ರೊಳಗಾಗಿ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಪ್ಪಳ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ ತಾಲೂಕಿನ ಎಂ.ಆರ್.ಡಬ್ಲೂಗಳು ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:08539-200460, ಕೊಪ್ಪಳ ಎಂ.ಆರ್.ಡಬ್ಲೂ ಜಯಶ್ರೀ ಮೊಸಂ: 9980126391, ಯಲಬುರ್ಗಾ ಎಂ.ಆರ್.ಡಬ್ಲೂ ಬಸನಗೌಡ ಮೊ.ಸಂ: 9964803047, ಕುಷ್ಟಗಿ ಎಂ.ಆರ್.ಡಬ್ಲೂ ಚಂದ್ರಶೇಕರ ಮೊ.ಸಂ: 9916308585, ಗಂಗಾವತಿ ಎಂ.ಆರ್.ಡಬ್ಲೂ ಮಂಜುಳಾ ಮೊ.ಸಂ: 7975398202, ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.