ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಮನೆಗೆ ದುಷ್ಕರ್ಮಿಗಳು ಕನ್ನ ಹಾಕಿದ್ದು, 7 ಸಾವಿರ ರೂ. ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ನಂದಿನಿ ಲೇಔಟ್ 4 ನೇ ಬ್ಲಾಕ್ ನ ರೈಲ್ವೆ ಮೈನ್ಸ್ ಕಾಲೋನಿ ನಿವಾಸದಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಒಲೀಸರು ದುಷ್ಕರ್ಮಿಗಳ ಪತ್ತೆ ಶೋಧ ಕಾರ್ಯ ನಡೆಸಿದ್ದಾರೆ.
ನಟಿ ವಿನಯಾ ಪ್ರಸಾದ್ ಹಾಗೂ ಅವರ ಪತಿ ಜ್ಯೋತಿ ಪ್ರಕಾಶ್ ಅವರು ಮನೆಗೆ ಬೀಗ ಹಾಕಿಕೊಒಂಡು ಕಾರ್ಯ ನಿಮಿತ್ತ ಅ.22 ರಂದು ಉಡುಪಿಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಮನೆಯ ಬಾಗಿಲ ಬೀಗವನ್ನು ಮುರಿದು ಮನೆ ಪ್ರವೇಶಿಸಿ 7 ಸಾವಿರ ರೂ. ನಗದು ಹಣ ದೋಚಿ ಪರಾರಿಯಾಗಿದ್ದಾರೆ.