ಚಿತ್ರದುರ್ಗ : ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಮಡಿವಾಳ ಮಠದ 14 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಇತರೆ ಸಮುದಾಯಗಳಿಗೆ ಅನ್ಯಾಯವಾಗದಂತೆ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಂವಿಧಾನದ ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ.ಈ ಬೇಡಿಕೆಯನ್ನು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ಇದೇ ವೇಳೆ ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪಗೆ ಮಾಚಿದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಂವಿಧಾನದ ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ. ಈ ಬಗ್ಗೆ ಗಮನ ಹರಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.
ನಾಲ್ಕು ನಗರಗಳಲ್ಲಿ ರಿಂಗ್ ರಸ್ತೆ
ರಾಯಚೂರು, ಕೊಪ್ಪಳ, ಗದಗ, ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಇದೇ ವರ್ಷದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ನಿನ್ನೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ ರಾಯಚೂರು, ಕೊಪ್ಪಳ, ಗದಗ, ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಇದೇ ವರ್ಷದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ರಸ್ತೆಗಳ ಅಭಿವೃದ್ಧಿಗೆ ಭೂಸ್ವಾಧೀನ ಮಾಡಿಕೊಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಅದನ್ನು ನಿರ್ವಹಿಸಲು ಒಪ್ಪಿಗೆ ಸೂಚಿಸಲಾಗಿದೆ’ ಎಂದರು.
‘ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ಶೇ 50ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸುತ್ತಿದೆ ಎಂದರು.ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯನ್ನು ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ನಲ್ಲಿ ಉದ್ಘಾಟಿಸಲಾಗುವುದು. ಎಸ್ ಟಿ ಆರ್ ಆರ್ ಅನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಹೊರ ವಲಯದಲ್ಲಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ..ಬೆಂಗಳೂರು ನಗರ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ನಗರ ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಮೇಲ್ಸೇತುವೆ ನಿರ್ಮಿಸಲು ಸೂಚಿಸಿರುವುದಾಗಿ ತಿಳಿಸಿದರು. ಬೆಂಗಳೂರು ನಗರದಲ್ಲಿ ಮೆಟ್ರೋ ನಿಲ್ದಾಣದಿಂದ ಪ್ರಯಾಣಿಕರಿಗೆ ಕೊನೆ ಹಂತದ ಸಂಪರ್ಕ ಒದಗಿಸುವ ಕುರಿತು ತಜ್ಞರಿಂದ ಅಧ್ಯಯನ ಮಾಡಿಸುವ ಕುರಿತು ಚರ್ಚಿಸಲಾಗಿದೆ. ರಾಯಚೂರು, ಕೊಪ್ಪಳ, ಯಾದಗಿರಿ, ಶಿವಮೊಗ್ಗ ವರ್ತುಲ ರಸ್ತೆಗಳನ್ನು ಈ ವರ್ಷದಲ್ಲಿಯೇ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.
ನಾಲ್ಕು ನಗರಗಳಲ್ಲಿ ರಿಂಗ್ ರಸ್ತೆ, ಇದೇ ವರ್ಷ ಕಾಮಗಾರಿ ಆರಂಭ : ಸಿಎಂ ಬೊಮ್ಮಾಯಿ