ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷವೇ ರಾಜ್ಯದ ಯಾದಗಿರಿ ಮತ್ತು ಹಾವೇರಿ ಜಿಲ್ಲೆಗಳ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಎಂಬಿಬಿಎಸ್ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ಆರೋಗ್ಯಯ ಅಯೋಗ ಅನುಮತಿ ನೀಡಿದೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾವೇರಿ ಮತ್ತು ಯಾದಗಿರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮುಂಬರುವ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
BIGG NEWS : ರಾಜ್ಯದ 1,454 ಗ್ರಾಮಗಳಿಗೆ ಸ್ಮಶಾನ ಸೌಲಭ್ಯವಿಲ್ಲ : ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಪರ್ವಕ್ಕೆ ಹೊಸ ಮುನ್ನುಡಿ!
ಯಾದಗಿರಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರಾಷ್ಟ್ರೀಯ ಆರೋಗ್ಯ ಆಯೋಗದ (NMC) ಅನುಮತಿ ದೊರೆತಿದ್ದು ಇದೇ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳಿಗೆ ಪ್ರವೇಶಾತಿ ಪ್ರಾರಂಭವಾಗಲಿದೆ.
1/2 pic.twitter.com/GaKaX0skqm
— Dr Sudhakar K (@mla_sudhakar) July 28, 2022
ಹಾವೇರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮುಂಬರುವ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದೆ.
1/3 pic.twitter.com/d2yu5bfwEV
— Dr Sudhakar K (@mla_sudhakar) July 28, 2022