ಬೆಂಗಳೂರು : ಹೊನ್ನಾವರದ ಪರೇಶ್ ಮೇಸ್ತಾ ಕೊಲೆಯಾಗಿಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ವರದಿ ಬೆನ್ನಲ್ಲೇ ಇದೀಗ ಪರೇಶ್ ಮೆಸ್ತಾ ಹತ್ಯೆ ಪ್ರಕರಣವನ್ನು ಮರುತನಿಖೆಗೆ ರಾಜ್ಯ ಸರ್ಕಾರಕ್ಕೆ ಒತ್ತಡ ಹೆಚ್ಚಾಗಿದೆ.
ಸಿಬಿಐ ವರದಿಗೆ ಪರೇಶ್ ಮೆಸ್ತಾ ತಂದೆ ಕಮಲಾಕರ ಮೆಸ್ತಾ ಕೂಡಾ ಅಸಮಾಧಾನ ವ್ಯಕ್ತಪಡಿಸಿ, ಕೇಸ್ನ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಕಮಲಾಕರ ಮೇಸ್ತಾ ಆಗ್ರಹಿಸಿದ್ದಾರೆ.ಸಿಬಿಐ ವರದಿ ಬಂದು ಈಗಾಗಲೇ ಎರಡು ವಾರಕ್ಕೂ ಹೆಚ್ಚು ಕಾಲವಾಗಿದ್ದು, ಮರು ತನಿಖೆ ಆದೇಶ ಮಾಡಬೇಕೆಂದು ಒತ್ತಡ ಜೋರಾಗಿದೆ.
ಹೊನ್ನಾವರದಲ್ಲಿ 2017ರ ಡಿಸೆಂಬರ್ 6ರಂದು ನಡೆದ ಗಲಭೆಯಲ್ಲಿ ಹೊನ್ನಾವರದ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತಾ ಶವ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು.