ಬೆಳಗಾವಿ : ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಬಳಿಕ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರೂ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು, ನನಗೂ ಸಚಿವ ಸ್ಥಾನ ಕೊಡಿ ಎಂದು ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಸಚಿವ ಸಂಪುಟದಲ್ಲಿ ಅವಕಾಶ ಕೊಡಬೇಕು. ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪಗೂ ಸಚಿವ ಸ್ಥಾನ ಕೊಡಬೇಕು. ಅದೇ ರೀತಿ ಹೊಸ ಮುಖಗಳಿಗೂ ಸಚಿವ ಸಂಪುಟದಲ್ಲಿ ಅವಕಾಶ ಕೊಡಬೇಕು. ಈ ಹಿಂದೆ ನಾನು ಅಬಕಾರಿ ಖಾತೆಯನ್ನು ಚೆನ್ನಾಗಿ ನಿಭಾಯಿಸಿದ್ದೆ ಎಂದು ಹೇಳಿದ್ದಾರೆ.