ದಾವಣಗೆರೆ : ಹೊನ್ನಾಳಿ ಶಾಸಕ ರೇಣುಕಾಚಾರ್ಯ ತಮ್ಮನ ಮಗನ ಚಂದ್ರಶೇಖರ್ ಸಾವಿನ ಪ್ರಕರಣದ ಎಫ್ ಎಸ್ ಎಲ್ ಹಾಗೂ ಮರಣೋತ್ತರ ವರದಿ ಬಳಿಕ ಚಂದ್ರು ಸಾವಿನ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರ್ ಸಾವಿನ ಕುರಿತ ಎಫ್ ಎಸ್ ಎಲ್ ವರದಿ ಹಾಗೂ ಮರಣೋತ್ತರ ಪರೀಕ್ಷೆ ವರದಿ ಬರಬೇಕು. ಆ ಎಲ್ಲ ವರದಿಗಳು ಬಂದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ. ತನಿಖೆ ಪ್ರಕ್ರಿಯೆ ಪೂರ್ಣವಾದ ಬಳಿಕ ಸ್ಪಷ್ಟ ಉತ್ತರ ಸಿಗಲಿದೆ ಎಂದು ತಿಳಿಸಿದ್ದಾರೆ.
ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಬಳಿಕ ಅವರ ಕಾರು ಹೊನ್ನಾಳಿ ಸಮೀಪದ ಕಾಲುವೆಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಚಂದ್ರು ಶವ ಪತ್ತೆಯಾಗಿತ್ತು. ಸದ್ಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.