ಬೆಂಗಳೂರು :ರಾಜ್ಯದಲ್ಲಿ ಮಹಾಮಳೆ ಬಳಿಕ ಚಳಿ ಹೆಚ್ಚಳವಾಗಿದ್ದು, ಚಳಿಗೆ ರಾಜ್ಯದ ಜನರು ತತ್ತರಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಳವಾಗಿದೆ.
ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಭಾಗದಲ್ಲಿ ಚಳಿ ಅಧಿಕವಾಗಿದೆ. ರಾಜಧಾನಿಯಲ್ಲಿ ಕನಿಷ್ಠ ದಾಖಲೆಯ ತಾಪಮಾನ ದಾಖಲಾಗಿದೆ. ಈ ವರ್ಷದ ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳ ಮೊದಲೆರಡು ವಾರಗಳಲ್ಲಿ ದಾಖಲೆ ಮಳೆಯಾಗಿತ್ತು. ಈ ಹಿನ್ನೆಲೆ ಕಾರ್ತಿಕ ಮಾಸ ಆರಂಭಕ್ಕೂ ಮುನ್ನವೇ ರಾಜಧಾನಿಯಲ್ಲಿ ಚಳಿ ಸೃಷ್ಟಿಯಾಗಿತ್ತು. ಸಹಜವಾಗಿ ಬೆಳಗ್ಗೆ ಎಂಟು ಗಂಟೆಯವರೆಗೂ ಚಳಿ ಇರಲಿದೆ.
ಬೆಂಗಳೂರಿನಲ್ಲಿ 28 – 17 ಡಿಗ್ರಿ, ಮೈಸೂರು 29 – 18, ಚಾಮರಾಜನಗರ 29 – 18, ರಾಮನಗರ 30-18, ಮಂಡ್ಯ 30-18, ಬೆಂಗಳೂರು ಗ್ರಾಮಾಂತರ 28-17, ಚಿಕ್ಕಬಳ್ಳಾಪುರ 27-15, ಕೋಲಾರ 28-17 ಡಿಗ್ರಿಯಷ್ಟು ತಾಪಮಾನ ದಾಖಲಾಗಿದೆ.