ಹಾವೇರಿ : ಈ ಬಾರಿ ಹಾವೇರಿಯಲ್ಲಿ ಅರ್ಥಪೂರ್ಣವಾಗಿ, ವಿಭಿನ್ನವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ರಾಜ್ಯ ಸರ್ಕಾರ 20 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಕನ್ನಡ & ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಮಾತನಾಡಿ , ಹಾವೇರಿಯಲ್ಲಿ ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸರ್ಕಾರದ ಅನುದಾನಕ್ಕೆ ಯಾವುದೇ ಕೊರತೆಗಳು ಆಗುವುದಿಲ್ಲ. ಸಿಎಂ ಬೊಮ್ಮಾಯಿ 20 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ, ಈ ಕಾರ್ಯಕ್ರಮಕ್ಕೆ ಮತ್ತು ಇದರ ಪೂರ್ವ ತಯಾರಿಯ ಬಗ್ಗೆ ಚರ್ಚಿಸುವಂತೆ, ಇದಕ್ಕೆ ಬೇಕಾದ ಕಾಮಗಾರಿ ತಕ್ಷಣವೇ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ, ಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಡೆಸಲು ನಿರ್ಧರಿಸಲಾಗಿದೆ. ಒಂದು ಪ್ರಧಾನ ವೇದಿಕೆ, ಎರಡು ಉಪವೇದಿಕೆಗಳು ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಹೇಳಲಾಗಿದೆ. ಜನವರಿ 6ರಂದು ಅದ್ದೂರಿ ಮೆರವಣಿಗೆ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಐದು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಬಳಸಿಕೊಂಡು ಅಚ್ಚುಕಟ್ಟಾಗಿ ಸಮ್ಮೇಳನ ನಡೆಸಲಾಗುತ್ತದೆ, ಇದಕ್ಕಾಗಿ ಸರ್ಕಾರ ಬಜೆಟ್ ನಲ್ಲಿ 20 ಕೋಟಿ ಮೀಸಲಿಟ್ಟಿತ್ತು, ಅಂತೆಯೇ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದರು.
ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7 ಮತ್ತು 8ರಂದು ನಡೆಸುವ ಕುರಿತು ನಿರ್ಧರಿಸಲಾಗಿದೆ., ಹಾವೇರಿ ಸಮ್ಮೇಳನವನ್ನು 2023ರ ಜನವರಿ 6, 7, 8ರ ಶುಕ್ರವಾರ, ಶನಿವಾರ ಮತ್ತು ರವಿವಾರದಂದು ನಡೆಸಲು ತೀರ್ಮಾನಿಸಲಾಗಿದೆ.. ಹಾವೇರಿಯಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಾನಾ ಕಾರಣಗಳಿಂದ ಅನೇಕ ಬಾರಿ ಮುಂದೂಡಲಾಗಿದ್ದು, ಈ ದಿನಾಂಕಗಳು ನಿಶ್ಚಿತವಾಗಿದ್ದು, ಮತ್ತೆ ಬದಲಾವಣೆ ಇಲ್ಲವೆಂಬ ತೀರ್ಮಾನವನ್ನು ಇತ್ತೀಚೆಗೆ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿತ್ತು.