ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ಆದೇಶಿಸಲಾಗಿತ್ತು. ಆದ್ರೇ..  ಈ ಆದೇಶವನ್ನು ರದ್ದು ಮಾಡಿಲಾಗಿದೆ. ಈ ಮೂಲಕ ಆನಂದ್ ಸಿಂಗ್ ಗೆ ಬಿಗ್ ಶಾಕ್ ನೀಡಲಾಗಿದೆ.

BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ

ರಾಜ್ಯ ಸರ್ಕಾರದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿದ್ದಂತ ಆನಂದ್ ಸಿಂಗ್ ಬದಲಾವಣೆ ಮಾಡಿ, ವಿಜಯನಗರ ಜಿಲ್ಲೆಗೆ ನೇಮಿಸಿ ನಿನ್ನೆ ಆದೇಶ ಹೊರಡಿಸಲಾಗಿತ್ತು. ಕೊಪ್ಪಳ ಜಿಲ್ಲೆಗೆ ಶಶಿಕಲಾ ಜೊಲ್ಲೆ ನೇಮಿಸಲಾಗಿತ್ತು. ಆದ್ರೇ.. ಸ್ವಂತ ಜಿಲ್ಲೆಗೆ ಉಸ್ತುವಾರಿಗಳನ್ನು ನೇಮಕ ಮಾಡುವಂತಿಲ್ಲ ಎಂಬುದಾಗಿ ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ಹೊರಡಿಸಿದ್ದಂತ ಆದೇಶವನ್ನು ಸಂಜೆ ರದ್ದು ಮಾಡಲಾಗಿದೆ.

BIGG NEWS : ಮಕ್ಕಳ ಪೋಷಕರಿಗೆ ಸಿಹಿಸುದ್ದಿ : ‘ಹೊಸ ಶಾಲೆ ಆರಂಭ’ಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಆದೇಶ ರದ್ದು ಮಾಡಲಾಗಿದ್ದು, ಇದೀಗ ವಿಜಯನಗರಕ್ಕೆ ಶಶಿಕಲಾ ಜೊಲ್ಲೆ, ಕೊಪ್ಪಳಕ್ಕೆ ಆನಂದ್ ಸಿಂಗ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮುಂದುವರೆಸಿ, ಆದೇಶಸಿಲಾಗಿದೆ.

Share.
Exit mobile version