ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಹಾಲಿ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪದಚ್ಯುತಿಗೊಳಿಸಿ, ಹೊಸ ಪೂರ್ಣಕಾಲೀನ ಪೀಠಾಧ್ಯಕ್ಷರನ್ನು ಸರ್ಕಾರವೇ ಆಯ್ಕೆ ಮಾಡುವ ಕುರಿತು ಚರ್ಚಿಸಲು ವೀರಶೈವ ಸಮುದಾಯದಿಂದ ಸಭೆ ಕರೆಯಲಾಗಿದೆ.
‘ಮಂಗಳೂರು ನೈತಿಕ ಪೊಲೀಸ್ ಗಿರಿ’ ಪ್ರಕರಣ: ಯುವಕನನ್ನು ಥಳಿಸಿದ ಮೂವರ ಬಂಧನ
ಡಾ.ಶಿವಮೂರ್ತಿ ಶಿವಶರಣರು ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲು ಆಗಿರುವಂತ ಬೆನ್ನಲ್ಲೇ, ಮಠದ ಪೀಠಾಧ್ಯಕ್ಷರ ಆಯ್ಕೆ ಕುರಿತಂತೆ ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಮುಖಂಡರ ಸಭೆಯನ್ನು ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಡಿಸೆಂಬರ್ 3 ರಂದು ಸಭೆ ಕರೆಯಲಾಗಿದೆ.
ಮುರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಮುರುಘಾ ಶರಣರನ್ನು ವಜಾಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಚರ್ಚಿಸಿ ಮುಂದಿನ ನಡೆಯ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.