ಕಿತ್ತೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಗ್ರಾಹಕರೇ ಗಮನಿಸಿ : ನಾಳೆಯಿಂದ ಬದಲಾಗಲಿವೆ ಈ ನಿಯಮಗಳು|New Rule From 1st November
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶಿಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.
ನಂದಿನಿ ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದರು.