ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದ್ದು, ರಸ್ತೆ ಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಬೆಂಗಳೂರಿನ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ರಸ್ತೆ ಗುಂಡಿಯನ್ನು ತಪ್ಪಿಸಲು ಕಾರು ಪಲ್ಟಿಯಾಗಿದ್ದು, ಪಲ್ಟಿಯಾದ ಕಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೇರಳ ಮೂಲದ ಅರ್ಷದ್ (24) ಸ್ಥಳದಲ್ಲೇ ಸಾವನ್ನಪ್ಪಿದ್ದು, ವಿದ್ಯಾರ್ಥಿ ರಾಹುಲ್ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.