ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬಿಡಿಎ ವಸತಿ ಯೋಜನೆ ಕಾಮಗಾರಿಗೆ ಗುತ್ತಿಗೆ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
BREAKING NEWS: SCO ಶೃಂಗಸಭೆ ನಂತ್ರ ಭಾರತಕ್ಕೆ ಆಗಮಿಸಿದ ಪ್ರಧಾನಿ ಮೋದಿ | PM Modi arrives to India
ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಸಚಿವ ಸೋಮಶೇಖರ್, ಶಶಿಧರ್ ಮುರಳಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ ಹಾಗೂ ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಕಂಪನಿಯಿಂದ ಐದು ನಕಲಿ ಕಂಪನಿಗಳ ಮೂಲಕ ಆರೋಪಿತರು ಕೋಟ್ಯಾಂತರ ರೂ. ಪಡೆದಿದ್ದಾರೆ ಎಂದು ಆರೋಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಬ್ರಾಹಂ ಅರ್ಜಿ ಸಲ್ಲಿಸಿದ್ದರು.
BIGG NEWS : ಕರ್ನಾಟಕ ವಿಧಾನಸಭೆಯಲ್ಲಿ ಎರಡು ಮಹತ್ವದ ಮಸೂದೆಗಳು ಅಂಗೀಕಾರ