ಮಡಿಕೇರಿ: ಸ್ಯಾಂಡಲ್ ವುಡ್ ಸೇರಿದಂತೆ ಬಾಲಿವುಡ್ ನಲ್ಲಿ ಟ್ರೆಂಡ್ ಮೂಡಿಸಿರುವಂತ ಕನ್ನಡದ ಕಾಂತಾರ ಚಿತ್ರದಲ್ಲಿನ ( Kaantaara Movie ) ದೈವಾರಾಧನೆ ಬಗ್ಗೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಈಗಾಗಲೇ ಎರಡು ದೂರು ದಾಖಲಾಗಿದೆ. ಈ ಬೆನ್ನಲ್ಲೇ ಮಡಿಕೇರಿಯಲ್ಲಿ ಮತ್ತೊಂದು ದೂರು ದಾಖಲಾಗಿದೆ.
ಮಡಿಕೇರಿಯ ಡಿವೈಎಸ್ಪಿಗೆ ಹಿಂದೂ ಯುವ ಸೇನೆಯಿಂದ ನಟ ಚೇತನ್ ( Achtor Chetan ) ವಿರುದ್ಧ ದೂರು ನೀಡಲಾಗಿದೆ. ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಡಿವೈಎಸ್ಪಿ ಗಜೇಂದ್ರ ಪ್ರಸಾದ್ಗೆ ದೂರು ಸಲ್ಲಿಸಿದ್ದಾರೆ.
ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲವೆನ್ನುವ ಟೀಕೆಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.